Webdunia - Bharat's app for daily news and videos

Install App

ಇಂಜಿನಿಯರಿಂಗ್ ಕಾಲೇಜ್ ಶುಲ್ಕ ಹೆಚ್ಚಳ

Webdunia
ಶನಿವಾರ, 2 ಮಾರ್ಚ್ 2019 (17:17 IST)
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕ ಈ ಬಾರಿ ದುಬಾರಿಯಾಗಲಿದೆ.
ರಾಜ್ಯದಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕವನ್ನು 2019-20ನೇ ಸಾಲಿಗೆ ಶೇ. 10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಕಾಮೆಡ್ಕೆ ಸೇರಿದಂತೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳೊಂದಿಗೆ ಶುಲ್ಕ ನಿಗದಿ ಕುರಿತಂತೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.
ಬಾರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ. 25ರಷ್ಟು ಪ್ರವೇಶ ಶುಲ್ಕ ಏರಿಕೆಗೆ ಒತ್ತಾಯ ಮಾಡಿದ್ದವು. ಬೇಡಿಕೆಯನ್ನು ಬದಿಗೊತ್ತಿ ಶೇ. 10ರಷ್ಟು ಪ್ರವೇಶ ಶುಲ್ಕ ಏರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ನಂತರ ಇಂಜಿನಿಯರಿಂಗ್ ಪ್ರವೇಶ ಶುಲ್ಕವನ್ನು ಶೇ. 10ರಷ್ಟು ಏರಿಕೆಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.

2019-20ನೇ ಸಾಲಿಗೆ ಮೊದಲ ಸ್ಲ್ಯಾಬ್ನಲ್ಲಿ 58,800 ರೂ., 2ನೇ ಸ್ಲ್ಯಾಬ್ನಲ್ಲಿ 65,340 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕಾಮೆಡ್ಕೆ ವ್ಯಾಪ್ತಿಗೊಳಪಡುವ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ  2019-20ನೇ ಸಾಲಿಗೆ ಪ್ರವೇಶ ಶುಲ್ಕ ಮೊದಲ ಸ್ಲ್ಯಾಬ್ನಲ್ಲಿ 1,43,748 ರೂ.ಗಳಾಗಿದ್ದರೆ, 2ನೇ ಸ್ಲ್ಯಾಬ್ನಲ್ಲಿ 2,1,960 ರೂ.ಗಳಾಗಿರುತ್ತದೆ ಎಂದು ಸಚಿವರು ವಿವರ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments