50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

Webdunia
ಬುಧವಾರ, 20 ಏಪ್ರಿಲ್ 2022 (17:04 IST)

50 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ಉನ್ನತಾಧಿಕಾರಿಗಳು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ತಾಂತ್ರಿಕ ಅಧ್ಯಯನ ಸಂಸ್ಥೆಗಳನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ಸಮಿತಿಯನ್ನು ಕೆಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ. ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ಗಳಿಗಾಗಿ ಈ ನಿಯಮ ಜಾರಿಯಲ್ಲಿದೆ. ಟೆಂಡರ್‌ಗಳು ಹೆಚ್ಚಾದ ಸಂದರ್ಭದಲ್ಲಿ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯನ್ನು ಶೀಘ್ರವಾಗಿ ರಚಿಸಲಾಗಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments