ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪವಾಗಿದ್ದು, ಪ್ರಕರಣದ ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
ಕಲಾಪ ಆರಂಭವಾದಾಗ ನಿಲುವಳಿ ಸೂಚನೆ ಪ್ರಸ್ತಾಪ ಮಂಡಿಸಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಹಲ್ಲೆ, ಹತ್ಯೆ, ಕೊಲೆ, ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಶಾಸಕರ ಪುತ್ರ ಮೊಹಮ್ಮದ್ ನಲಪಾಡ್ ವಿರುದ್ಧ 11 ಪ್ರಕರಣಗಳು ದಾಖಲಾಗಿವೆ. ಆದರೆ, ಗುಂಡಾ ಕಾಯ್ದೆ ಜಾರಿಗೊಳಿಸಿಲ್ಲ, ಗಡಿಪಾರು ಮಾಡಿಲ್ಲ. ಹಲ್ಲೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದೆಯೇ ಎಂದು ಕಿಡಿ ಕಾರಿದ್ದಾರೆ.
ಕೆ.ಆರ್.ಪುರಂ ಬಿಬಿಎಂಪಿ ಕಚೇರಿಯಲ್ಲೂ ಕಾಂಗ್ರೆಸ್ ಪಕ್ಷದ ಮುಖಂಡನಿಂದ ದಾಂಧಲೆ ನಡೆದಿದೆ, ಕಚೇರಿಗೆ ಬೆಂಕಿ ಹಚ್ಚು ಸುಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಮುಖ್ಯಮಂತ್ರಿಗೆ ಹಾಗೂ ಗೃಹ ಸಚಿವರಿಗೆ ಶೋಭೆ ತರುತ್ತದೆಯೇ ಎಂದು ಕೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.