ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪಿಎ ವಿನಯ್ ಎನ್ನುವವರನ್ನು ಕೆಲ ದುರ್ಷ್ಕರ್ಮಿಗಳು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದೆ.
ಮನೆಯಲ್ಲಿದ್ದ ವಿನಯ್ ಅವರ ನಿವಾಸಕ್ಕೆ ಕಾರಿನಲ್ಲಿ ಆಗಮಿಸಿದ ಐದು ಮಂದಿ ಆರೋಪಿಗಳ ತಂಡ ಅವರನ್ನು ಒತ್ತಾಯಪೂರ್ವಕವಾಗಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಆ ಸಂದರ್ಭದಲ್ಲಿ ವಿನಯ್ ಜೋರಾಗಿ ಕಿರುಚಿಕೊಂಡಿದ್ದಾರೆ.
ವಿನಯ್ ಜೋರಾಗಿ ಕೂಗುತ್ತಿರುವುದನ್ನು ಕೇಳಿದ ನೆರೆಹೊರೆಯವರು, ಆರೋಪಿಗಳನ್ನು ಸುತ್ತುವರಿಯಲು ಪ್ರಯತ್ನಿಸಿದಾಗ ಲಾಂಗ್, ಮಚ್ಚುಗಳಿಂದ ಬೆದರಿಸಿ ಪರಾರಿಯಾಗಿದ್ದಾರೆ.
ಆರೋಪಿಗಳು ಲಾಂಗ್ ಮತ್ತು ಮಚ್ಚುಗಳಿಂದ ಹಲ್ಲೆ ಮಾಡಿದ್ದರಿಂದ ವಿನಯ್‌ಗೆ ಗಂಭೀರವಾಗಿ ಗಾಯಗಳಾಗಿವೆ. ಕೂಡಲೇ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.