Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಂಬೇಡ್ಕರ್ ಜಯಂತಿಗೂ ಮೊದಲೇ ಸಂವಿಧಾನ ಶಿಲ್ಪಿಗೆ ಅವಮಾನ

ಅಂಬೇಡ್ಕರ್ ಜಯಂತಿಗೂ ಮೊದಲೇ ಸಂವಿಧಾನ ಶಿಲ್ಪಿಗೆ ಅವಮಾನ
ಕಲಬುರಗಿ , ಶುಕ್ರವಾರ, 12 ಏಪ್ರಿಲ್ 2019 (12:09 IST)
ದೇಶದಲ್ಲೆಡೆ ಸಂವಿಧಾನ ಶಿಲ್ಪಿಯ ಜಯಂತ್ಯುತ್ಸವಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮಹಾಚೇತನಕ್ಕೆ ಅವಮಾನ ಮಾಡಲಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಕೇಸ್ ದಾಖಲಾಗಿದೆ.

ಅಂಬೇಡ್ಕರ್ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಕೆಲವು ವಾಟ್ಸಪ್ ಗ್ರುಪ್ ಗಳ ಡಿಪಿಗೆ ಅಂಬೇಡ್ಕರ್ ರ ಭಾವಚಿತ್ರವನ್ನು ಇಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆರೋಪಿ ವಾಟ್ಸಪ್ ಡಿಪಿ ಇಟ್ಟಿರುವ ವ್ಯಕ್ತಿಯೊಂದಿಗೆ ಮಾತನಾಡಿ ಜಾತಿ ನಿಂದನೆ ಮಾಡಿದ್ದಾರೆ. ಅಷ್ಟೇ ಅಲ್ಲ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ ಸುಭಾಷ ಮಾನೆ ಎಂಬಾತ ಸಂವಿಧಾನ ಹಾಗೂ ಅಂಬೇಡ್ಕರ್ ರಿಗೆ ಅಪಮಾನ ಆಗುವ ಹಾಗೆ ಮಾತನಾಡಿದ್ದಾರೆ. ಇದನ್ನು ಖಂಡಿಸಿ ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಆಳಂದ ತಾಲೂಕಿನ ದಲಿತ ಸಂಘರ್ಷ ಸಮಿತಿ ಸಂಚಾಲಕ ಪ್ರಕಾಶ ಚಂದಪ್ಪಾ ಸರ್ವೋದಯ ಎಂಬುವರು ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಆಯಸ್ಸು ಮುಗಿತಾ ಬಂದಿದೆ- ಬಿ ಎಸ್ ಯಡಿಯೂರಪ್ಪ