Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿರಾಗಾಂಧಿ ಮರಳಿ ಬಂದರೂ 370ನೇ ವಿಧಿ ಮರು ಜಾರಿಯಾಗಲ್ಲ: ರಾಹುಲ್‌ಗೆ ಸವಾಲೆಸೆದ ಅಮಿತ್‌ ಶಾ

370 Article, Central Home Minister Amith Shah, LokSabha Opposition Leader R Ashok,

Sampriya

ಧುಲೆ , ಬುಧವಾರ, 13 ನವೆಂಬರ್ 2024 (16:12 IST)
Photo Courtesy X
ಧುಲೆ: ಇಂದಿರಾ ಗಾಂಧಿ ಅವರು ಸ್ವರ್ಗದಿಂದ ಹಿಂತಿರಿಗಿದರೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ಮರು ಜಾರಿಯಾಗಲ್ಲ. ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏನಾದರೂ 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿ ಮರು ಜಾರಿ ಅಸಾಧ್ಯ ಎಂದರು.

ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ಇದರಿಂದ ರಾಹುಲ್ ಗಾಂಧಿ ಅವರು ತಿಳಿದುಕೊಳ್ಳಬೇಕಾಗಿರುವುದು ಏನೆಂದರೆ ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಸವಾಲು ಎಸೆದರು.


Share this Story:

Follow Webdunia kannada

ಮುಂದಿನ ಸುದ್ದಿ

ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆ ಮಾಡಲ್ಲ, ಕಾರಣ ಹೀಗಿದೆ