ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಜಾರ್ಜ್ ವಿರುದ್ಧ ಮತ್ತೆ ಎಸಿಬಿಯಲ್ಲಿ 2 ಪ್ರತ್ಯೇಕ ದೂರು ದಾಖಲಾಗಿದೆ.
ಬೆಂಗಳೂರು ರಸ್ತೆ ಅಭಿವೃದ್ಧಿ ಹೆಸರಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 600 ಕೋ. ಅವ್ಯವಹಾರ ನಡೆದಿದೆ ಎಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂಎಉ ದಾಖಲಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2 ಸಾವಿರದ 600 ಕೋಟಿ ರೂ. ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ ಕಾಮಗಾರಿಯಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ ಬರೋಬ್ಬರಿ 3 ಸಾವಿರದ 097 ಪುಟದಷ್ಟು ದಾಖಲೆ ಬಿಡುಗಡೆ ಮಾಡಿದ್ದಾರೆ.
ರಸ್ತೆ ಅಭಿವೃದ್ಧಿ ಹೆಸರಲ್ಲಿ 400 ಕೋಟಿ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 200 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ.