Daily Horoscope
✕

ದಿ.ಎಸ್.ಬಂಗಾರಪ್ಪನವರ ಶಿಷ್ಯನ ಭೀಕರ ಕೊಲೆ

Webdunia
ಸೋಮವಾರ, 30 ಜುಲೈ 2018 (16:35 IST)
ದಾಂಡೇಲಿ ತಾಲೂಕು ಹೋರಾಟಗಾರ, ವಕೀಲ ಅಜಿತ್ ನಾಯಕ (57) ಅವರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
 

ಪಟ್ಟಣದ ಬಸ್ ನಿಲ್ದಾಣದ ಸಮೀಪದ ಜೆ.ಎನ್‌.ರಸ್ತೆಯಲ್ಲಿರುವ ತಮ್ಮ ಕಛೇರಿಯಿಂದ ಕೆಳಗಿಳಿದು ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಬಂದು ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ. ಅಜಿತ್ ನಾಯಕ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ದಾಂಡೇಲಿಯನ್ನು ತಾಲೂಕನ್ನಾಗಿಸಲು ನಡೆಸಿದ ಹೋರಾಟಗಳಲ್ಲಿ ಅವರು ಮುಂಚೂಣಿಯಲ್ಲಿದ್ದರು. ನಗರಸಭೆಯ ಮಾಜಿ ಅಧ್ಯಕ್ಷರು, ದಾಂಡೇಲಿ ತಾಲೂಕು ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.  

ಈ ಹಿಂದೆ ಸಂಸದರಾಗಿದ್ದ ಮಾರ್ಗರೇಟ್ ಆಳ್ವಾ ಮತ್ತು ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರೀತಿಯ ಶಿಷ್ಯರಾಗಿ ಅಂದು ಗಮನ ಸೆಳೆದಿದ್ದ ಅವರು, ಅನೇಕ ವರ್ಷಗಳ ಕಾಲ ದಾಂಡೇಲಿ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದರು. 2007ನೇ ಸಾಲಿನಲ್ಲಿ ದಾಂಡೇಲಿ ಬಚಾವೋ ಸಮಿತಿಯ ಮೂಲಕ ದಾಂಡೇಲಿ ತಾಲೂಕು ರಚನೆಗಾಗಿ ಅಮೂಲಾಗ್ರ ಹೋರಾಟವನ್ನು ನಡೆಸಿ ರಾಜ್ಯ ಮಟ್ಟದ ನಾಯಕರನ್ನು ಕರೆಸಿ ಸಂಚಲನ ಮೂಡಿಸಿದ್ದರು. ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರಿಗೆ ಪತ್ನಿ ಭಾರತಿ ಮತ್ತು ಇಬ್ಬರು ಪುತ್ರರಿದ್ದಾರೆ‌.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ದರದಲ್ಲಿ ವ್ಯತ್ಯಾಸ, ಇಂದಿನ ದರ ಹೀಗಿದೆ

ಮೆಟ್ರೋ ನಿಲ್ದಾಣದಲ್ಲಿ ಅಮ್ಮನಿಂದ ಬೇರೆಯಾಗಿದ್ದ ಮಗ.. ಮುಂದೆ ಆಗಿದ್ದು ನಿಜಕ್ಕೂ ಮನಕಲಕುವ ಘಟನೆ Video

ಇಂದಿರಾ ನಗರದಲ್ಲಿ ಶಾಕಿಂಗ್ ಘಟನೆ: ಯುವತಿಯ ಕುತ್ತಿಗೆಗೆ ಚಾಕು ಹಿಡಿದ ಕಳ್ಳ, ಮುಂದಾಗಿದ್ದು ನಿಜಕ್ಕೂ ಶಾಕಿಂಗ್ Video

ಪಾಸ್ ಪೋರ್ಟ್ ನವೀಕರಣಕ್ಕೆ ಬಂದ ವ್ಯಕ್ತಿಯ ಪುಸ್ತಕ ನೋಡಿ ಅಧಿಕಾರಿಗಳೇ ಶಾಕ್: ಅಂತಹದ್ದೇನಿತ್ತು ನೀವೇ ನೋಡಿ Video

ಹಾಲಿನ ದರ ಆಯ್ತು, ಇನ್ನೀಗ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬರೆ: ನಾಳೆಯೇ ಘೋಷಣೆ

ಮುಂದಿನ ಸುದ್ದಿ
Show comments