Select Your Language

Notifications

webdunia
webdunia
webdunia
webdunia

ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಇನ್ನಿಲ್ಲ

BC Nagesh
ಬೆಂಗಳೂರು: ತಿಪಟೂರು ಕ್ಷೇತ್ರದ ಮಾಜಿ ಶಾಸಕರು ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಶ್ರೀ ಬಿ.ಸಿ.ನಾಗೇಶ್ (65 ವರ್ಷ) ಅವರು ಇಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ಮೃತಪಟ್ಟರು. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇಂದು ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ. ನಾಳೆ ಸರ್ಕಾರೀ ಗೌರವಗಳೊಂದಿಗೆ ತಿಪಟೂರಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ಬಿ.ಸಿ.ನಾಗೇಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka weather: ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ ಇಲ್ಲಿದೆ