Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಅರಗ ಜ್ಞಾನೇಂದ್ರ

Araga Jnanendra

Krishnaveni K

ಬೆಂಗಳೂರು , ಶನಿವಾರ, 25 ಮೇ 2024 (14:29 IST)
ಬೆಂಗಳೂರು: ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ತಿಳಿಸಿದರು.
 
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ಅಪರಾಧಿಗಳಿಗೆ ಗೌರವ ಇಲ್ಲ ಅಥವಾ ಭಯ ಇಲ್ಲ. ಪೊಲೀಸ್ ವ್ಯವಸ್ಥೆಯನ್ನೇ ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುವ ಪ್ರಯತ್ನ ಈ ಸರಕಾರದ ಕಡೆಯಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಟೀಕಿಸಿದರು.
 
ನಿನ್ನೆ ಚನ್ನಗಿರಿಯಲ್ಲಿ ನಡೆದ ಪ್ರಕರಣದಡಿ ಅಪರಾಧಿಯನ್ನು ಕರೆದುಕೊಂಡು ಬಂದಿದ್ದರು. ಲಾಕಪ್ ಡೆತ್ ಎಂದು ಹೇಳಿದ್ದಾರೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಅಪರಾಧದ ಸಂಖ್ಯೆ ಹೆಚ್ಚಳದಿಂದ ಜನರ ನೆಮ್ಮದಿ ಹಾಳಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಪರಾಧ ಪ್ರಕರಣಗಳ ಹೆಚ್ಚಳ ಕುರಿತ ಅಂಕಿ ಅಂಶಗಳನ್ನು ಅವರು ಮುಂದಿಟ್ಟರು.

ಆಡಳಿತದಲ್ಲಿ ಇರುವವರು ಬಿಗಿಯಾಗಿ ಇದ್ದಾಗ ಮಾತ್ರ ಶಾಂತ ಪರಿಸ್ಥಿತಿ ಲಭಿಸುತ್ತದೆ. ಈ ಸರಕಾರದಡಿ ವಿಧಾನಸೌಧದ ಒಳಗೇ ದೇಶವಿರೋಧಿ, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಮೊನ್ನೆ ಕೊಪ್ಪದಲ್ಲೂ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲೂ ಪ್ರಕಟಗೊಂಡಿದೆ ಎಂದು ವಿವರಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಹರೀಶ್ ಪೂಂಜಾ ಪ್ರಕರಣ, ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ