Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅನಾರೋಗ್ಯ: ಮಾಜಿ ಸಚಿವ ಅಂಬರೀಷ್ ಆಸ್ಪತ್ರೆಗೆ ದಾಖಲು

ಅನಾರೋಗ್ಯ: ಮಾಜಿ ಸಚಿವ ಅಂಬರೀಷ್ ಆಸ್ಪತ್ರೆಗೆ ದಾಖಲು
ಬೆಂಗಳೂರು , ಗುರುವಾರ, 20 ಜುಲೈ 2017 (15:56 IST)
ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 
ನಗರದ ವಿಕ್ರಂ ಆಸ್ಪತ್ರೆಗೆ ಅಂಬರೀಷ್ ದಾಖಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ಅಂಬರೀಷ್ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದು ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
 
ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಅಂಬರೀಷ್ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವೈದ್ಯರನ್ನ ಕಿಡ್ನ್ಯಾಪ್ ಮಾಡಿ 5 ಕೋಟಿ ಬೇಡಿಕೆ ಇಟ್ಟಿದ್ದ ಓಲಾ ಡ್ರೈವರ್..!