ಕೊನೆಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಇಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಂಬಲಿಗರು, ಹಿತೈಷಿಗಳ ಸಭೆಯಲ್ಲಿ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸಿದ್ದರಾಮಯ್ಯರಿರುವ ಕಾಂಗ್ರೆಸ್ ಪಕ್ಷದಲ್ಲಿ ನಾನಿರುವುದಿಲ್ಲ ಎಂದು ಗುಡುಗಿದರು.
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ದ್ವೇಷವಿಲ್ಲ. ಅಧಿಕಾರದಲ್ಲಿರುವವರು ಕಾಂಗ್ರೆಸ್ ಪಕ್ಷವನ್ನು ವಿನಾಶದ ಅಂಚಿಗೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯಿಂದ ಬೇಸತ್ತಿರುವ ಅವರು, ಕುರುಬ ಸಮುದಾಯದವರಿಗೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ. ನಿಮ್ಮ ಸಮುದಾಯವನ್ನು ನೀವೇ ತುಳಿಯುತ್ತಿದ್ದೀರಿ. ನೀವು ಇಂತಹ ಸಣ್ಣ ಮನಸ್ಸಿನವರು ಎಂದು ಗೊತ್ತಿರಲಿಲ್ಲ. ಗೊತ್ತಿದ್ದರೆ ನಿಮ್ಮನ್ನು ಕಾಂಗ್ರೆಸ್ ಪಕ್ಷದೊಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೆಲ ದಿನಗಳ ಹಿಂದೆ, ಶೀಘ್ರಧಲ್ಲಿಯೇ ಎಚ್,ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿರುವುದನ್ನು ಸ್ಮರಿಸಬಹುದು.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.