Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಎಂ.ಶಿವಣ್ಣ ಬಿಜೆಪಿ ಸೇರ್ಪಡೆಗೆ ಚಿಂತನೆ

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಎಂ.ಶಿವಣ್ಣ ಬಿಜೆಪಿ ಸೇರ್ಪಡೆಗೆ ಚಿಂತನೆ
ಬೆಂಗಳೂರು , ಶನಿವಾರ, 25 ಮಾರ್ಚ್ 2017 (13:24 IST)
ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಂಸದ ಎಂ.ಶಿವಣ್ಣ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮಾಜಿ ಸಂಸದ ಎಂ.ಶಿವಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ, ಬಿಜೆಪಿಯಿಂದ ಗ್ರೀನ್ ಸಿಗ್ನಲ್ ದೊರೆತಲ್ಲಿ ಉಪಚುನಾವಣೆಗೆ ಮುನ್ನವೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಶಿವಣ್ಣ, ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರಿಗೆ ಗೌರವವಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದೇನೆ ಎಂದು ಶಿವಣ್ಣ ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎಂದು ಮಾಜಿ ಸಂಸದ ಎಂ.ಶಿವಣ್ಣ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೋತಿಷಿ ಹೇಳಿದನೆಂದು ಗಂಡು ಮಗುವಿಗಾಗಿ 10 ಮಕ್ಕಳನೆತ್ತ ದಂಪತಿ