ಕಾವೇರಿ ವಿಚಾರದಲ್ಲಿ ಇಲ್ಲಿಯವರೆಗೂ ದೂರ ಉಳಿದಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಕೇಂದ್ರದಿಂದ ಆಗಮಿಸಿರುವ ತಾಂತ್ರಿಕ ತಂಡವನ್ನು ಭೇಟಿ ಮಾಡಿ ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು.
ಮಂಡ್ಯ ಜಿಲ್ಲೆಯ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೇಂದ್ರದಂದ ಆಗಮಿಸಿರು ತಾಂತ್ರಿಕ ತಂಡದ ಅಧಿಕಾರಿಗಳನ್ನು ಭೇಟಿ ಮಾಡಿದ ರಮ್ಯಾ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಕುರಿತು ಕೇಂದ್ರದ ತಾಂತ್ರಿಕರ ತಂಡಕ್ಕೆ ಮಾಹಿತಿ ನೀಡಿದ್ದೇನೆ ಎಂದರು.
ಮಳೆಯ ಕೊರತೆಯಿಂದ ನಮಗೆ ಕುಡಿಯುವ ನೀರಿನ ಅಭಾವ ಇದೆ. ಇಂತಹ ಸಂದರ್ಭದಲ್ಲಿ ನಾವು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಕಾರಣಕಾಗಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಕಾವೇರಿ ವಿಚಾರದಲ್ಲಿ ಸುಪ್ರೀಂ ಆದೇಶ ಪಾಲಿಸಬೇಕಾಗುತ್ತದೆ ಎಂದು ರಮ್ಯಾ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ