Publish Date: Tue, 28 Jan 2020 (10:57 IST)
Updated Date: Tue, 28 Jan 2020 (10:59 IST)
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರ ಭೇಟಿಗೆ ಸಿಎಂ ಬಿಎಸ್ ವೈ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಎಂ ಈಗಾಗಲೇ ಸಚಿವ ಸಂಪುಟದ ಬಗ್ಗೆ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದು, ಅದರ ಜೊತೆ ಗುರುವಾರ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಹೀಗಾಗಿ ವರಿಷ್ಠರ ಜತೆ ಚರ್ಚೆ ಬಳಿಕ ಶುಕ್ರವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಖಾತೆ ಹಂಚಿಕೆ ಬಗ್ಗೆಯೂಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.