Publish Date: Tue, 29 Sep 2020 (10:33 IST)
Updated Date: Tue, 29 Sep 2020 (10:37 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗಿಂತ ಪುನಾರಚನೆ ಸಾಧ್ಯತೆಯೇ ಹೆಚ್ಚಾಗಿದ್ದು, ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬಳಿಕ ಅಂತಿಮ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.
ಆದಕಾರಣ ದೆಹಲಿಗೆ ಬಂದು ಭೇಟಿಯಾಗಲು ಸಿಎಂಗೆ ವರಿಷ್ಠರು ಸೂಚನೆ ನೀಡಿದ್ದು, ಹೀಗಾಗಿ 3-4 ದಿನಗಳಲ್ಲಿ ದೆಹಲಿಗೆ ಹೋಗುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಂಪುಟ ಪುನಾರಚನೆಯಾದ್ರೆ 6-7 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮೂವರು ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಎರಡು ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಿದ್ರೂ ಅಚ್ಚರಿ ಇಲ್ಲ ಎನ್ನಲಾಗಿದೆ.
ಅಲ್ಲದೇ ಸಂಪುಟ ಪುನಾರಚನೆ ಜತೆ ಸಿಎಂ ಬದಲಾವಣೆ ಬಗ್ಗೆಯೂ ಮಾತು ಬರಬಹುದು ಎನ್ನಲಾಗಿದೆ. ಅಮಿತ್ ಶಾ ಭೇಟಿ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.