Publish Date: Tue, 30 Nov 2021 (14:07 IST)
Updated Date: Tue, 30 Nov 2021 (14:45 IST)
ಹೊಸ ಪ್ರಬೇಧದ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಯಾವ ರೀತಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಟುವಟಿಕೆಗಳ ಮೇಲೆ ನಿರ್ಬಂಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿ ಹೊಸ ಪ್ರಬೇಧದ ವೈರಸ್ ಒಮಿಕ್ರೋನ್ ಪತ್ತೆಯಾಗಿದೆ.
ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು. ಅಲ್ಲದೇ ಅಂತಾರಾಜ್ಯ ಪ್ರಯಾಣಿಕರು, ಗಡಿಪ್ರದೇಶಗಳಲ್ಲಿನ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು. ಕೇರಳ ಗಡಿಭಾಗದಲ್ಲಿ ಮತ್ತಷ್ಟು ಎಚ್ಚರಿಕೆ ವಹಿಸಲು ಸಿಎಂ ಬೊಮ್ಮಾಯಿ ಈಗಾಗಲೇ ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ.
geetha
Publish Date: Tue, 30 Nov 2021 (14:07 IST)
Updated Date: Tue, 30 Nov 2021 (14:45 IST)