Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ: 3 ದಿನಗಳಲ್ಲೇ ತನಿಖೆ ಪೂರ್ಣ

ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ: 3 ದಿನಗಳಲ್ಲೇ ತನಿಖೆ ಪೂರ್ಣ
ಹುಬ್ಬಳ್ಳಿ , ಶನಿವಾರ, 26 ಅಕ್ಟೋಬರ್ 2019 (18:25 IST)
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೀಗಂತ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅಲ್ಲದೇ ಸ್ಟೇಷನ್ ಮಾಸ್ಟರ್ ಎಸ್. ಎಂ. ವರುಣಕುಮಾರ, ಆರ್ ಪಿಎಫ್ ಎಎಸ್ ಐ ಮಂಜುನಾಥ ಎಂಬ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಮೂರು ದಿನಗಳಲ್ಲಿ ಘಟನೆಗೆ ಸಂಬಂಧಿಸಿದಂತೆ ವರದಿ ಬರಲಿದೆ ಎಂದರು.

ಇನ್ನೂ ರೈಲ್ವೆ ನಿಲ್ದಾಣಕ್ಕೆ ವಿಮಾನ ನಿಲ್ದಾಣದಲ್ಲಿರುವ ಭದ್ರತಾ ಮಾದರಿಯಂತೆ ಭದ್ರತೆ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಭದ್ರತೆಗಾಗಿ ಸ್ಕ್ಯಾನಿಂಗ್ ಮಷಿನ್ ಅಳವಡಿಸಲಾಗುವುದು. ರೈಲ್ವೆ ನಿಲ್ದಾಣಗಳಲ್ಲಿ ಅನಧಿಕೃತ ವ್ಯಕ್ತಿಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಸಿಎಂ ನಾನೇ ಎಂದ ಉಮೇಶ್ ಕತ್ತಿ