ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟಿನ ಹಾವಳಿ ಶುರುವಾಗಿದೆ ಎಂಬುದಾಗಿ ತಿಳಿದುಬಂದಿದೆ.
ನಾಗದೇವನಹಳ್ಳಿ ರೋಟರಿ ವಿದ್ಯಾಲಯ ಮತಗಟ್ಟೆಯಲ್ಲಿ ಕ್ರಮ ಸಂಖ್ಯೆ 1034ರ ಮನ್ಸೂಖ್ ಪಟೇಲ್ ವೋಟರ್ ಐಡಿಗೆ ನಕಲಿ ಮತದಾನ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ.
ಈ ಹಿನ್ನಲೆಯಲ್ಲಿ ತಮ್ಮ ಮತವನ್ನು ಬೇರೆ ಯಾರೋ ಚಲಾಯಿಸಿದ್ದಾರೆ ಎಂದು ಆರೋಪಿಸಿ ಮನ್ಸೂಖ್ ಪಟೇಲ್ ಟೆಂಡರ್ ವೋಟ್ ಮಾಡಲು ಪಟ್ಟು ಹಿಡಿದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.