Publish Date: Tue, 06 Oct 2020 (17:37 IST)
Updated Date: Tue, 06 Oct 2020 (17:39 IST)
ಭಾರತ ಚುನಾವಣಾ ಆಯೋಗದಿಂದ ನೀಡುವ ಮತದಾರರ ಗುರುತಿನ ಪತ್ರವನ್ನು ನಕಲಿಯಾಗಿ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಕೇಸ್ ಬಯಲಿಗೆ ಬಂದಿದೆ.
ಸೇವಾಸಿಂಧು ಸಾಮಾನ್ಯ ಸೇವಾ ಕೇಂದ್ರದಲ್ಲಿ(ಕಾಮನ್ ಸರ್ವಿಸ್ ಸೆಂಟರ್) ಒಂದರಲ್ಲಿ ಭಾರತ ಚುನಾವಣಾ ಆಯೋಗದಿಂದ ನೀಡುವ ಮತದಾರರ ಗುರುತಿನ ಪತ್ರವನ್ನು ನಕಲಿಯಾಗಿ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿಯನ್ನು ಆಧರಿಸಿ ಹಾವೇರಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲ ದಾಖಲೆಗಳನ್ನು ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ, ನಕಲಿ ವೋಟರ್ ಐಡಿ ಸೃಷ್ಟಿಸುತ್ತಿರುವ ಕುರಿತ ಮಾಹಿತಿ ಆಧಾರದ ಮೇಲೆ ನಮ್ಮ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಎಷ್ಟು ಐಡಿಗಳನ್ನು ಸೃಷ್ಟಿಸಿದ್ದಾನೆ, ಇದರ ಮೂಲ ಕುರಿತಂತೆ ತನಿಖೆಯಿಂದ ಹೆಚ್ಚಿನ ವಿವರ ದೊರೆಯಲಿದೆ ಎಂದಿದ್ದಾರೆ.