Publish Date: Sun, 28 Mar 2021 (10:05 IST)
Updated Date: Sun, 28 Mar 2021 (10:07 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ಸಾವಿನ ಪ್ರಯತ್ನ ಮಾಡುವ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಅಂತಹದ್ದೇ ಒಂದು ಘಟನೆ ದೇವನಹಳ್ಳಿಯಲ್ಲಿ ವರದಿಯಾಗಿದೆ.
ಒಂದೇ ಕುಟುಂಬದ ಮೂವರು ಸೋಷಿಯಲ್ ಮೀಡಿಯಾದಲ್ಲಿ ಲೈವ್ ವಿಡಿಯೋ ಮಾಡಿಕೊಂಡು ವಿಷ ಸೇವಿಸಿ ಜೀವಕೊನೆಗಾಣಿಸುವ ಪ್ರಯತ್ನ ನಡೆಸಿದ್ದಾರೆ. ಅದೃಷ್ಟವಶಾತ್ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬದುಕುಳಿದಿದ್ದಾರೆ.
ತಮಗೆ ಕೆಲವರಿಂದ ಕಿರುಕುಳವಾಗುತ್ತಿದೆ. ಇದರಿಂದ ಮನನೊಂದು ಜೀವಕೊನೆಗಾಣಿಸುತ್ತಿರುವುದಾಗಿ ಈ ಮೂವರೂ ಲೈವ್ ವಿಡಿಯೋದಲ್ಲಿ ಹೇಳಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.