Publish Date: Sun, 06 Nov 2022 (17:37 IST)
Updated Date: Sun, 06 Nov 2022 (17:43 IST)
ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಬೋತಗಿ ಗ್ರಾಮದಲ್ಲಿ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೋತಗಿ ಗ್ರಾಮದ ಸಂದೀಪ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.
ರೈತ PKPS ಬ್ಯಾಂಕ್ ಸೇರಿದಂತೆ ಖಾಸಗಿ ಸಾಲ ಸೇರಿ ಒಟ್ಟು 9.50ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹುಮನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.