Publish Date: Thu, 22 Nov 2018 (17:05 IST)
Updated Date: Thu, 22 Nov 2018 (17:08 IST)
ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿಗೆ ಒಳ್ಳೆಯ ಬುದ್ದಿ ಕೊಡಲಿ. ಹೀಗಂತ ರೈತರು ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ದೇವರ ಮೊರೆ ಹೋಗಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮದ ದೇವರಾದ ಮುರಸಿದ್ದೇಶ್ವರ ದೇವಸ್ಥಾನವರೆಗೆ ದಿರ್ಘ ದಂಡ ನಮಸ್ಕಾರ ಹಾಕಿ ಹರಕೆ ಹೊತ್ತಿದ್ದಾರೆ. ಕಳೆದ ಆರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು, ಸಿಎಂಗೆ ಒಳ್ಳೆ ಬುದ್ಧಿ ಕೊಡಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.
ರೈತರ ಹದಿನೈದು ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸುವ ಸಲುವಾಗಿ 15 ದಿನಗಳ ನಂತರ ಕುಮಾರಸ್ವಾಮಿ ಯವರಿಗೆ ಒಳ್ಳೆಯ ಬುದ್ದಿ ಕೊಡಲಿ. ಹೀಗಂತ ದೇವರಿಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ರೈತರು ತಮ್ಮ ಮೊರೆ ಇಟ್ಟಿದ್ದಾರೆ.