ಪುತ್ರಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಆರೋಪಿ, ತನ್ನದೇ ಪುತ್ರಿಯನ್ನು ಬೆದರಿಸಿ ನಿರಂತರವಾಗಿ ರೇಪ್ ಮಾಡಿರುವ ಘಟನೆ ವರದಿಯಾಗಿದೆ.
ಮಾಟ ಮಂತ್ರ ಮಾಡಿಸುವ ನೆಪದಲ್ಲಿ ಪುತ್ರಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.