ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ಎದುರಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಉಮ್ಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇತ್ತ ಕಡೆ ರೈತರು ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.
ಕಾವೇರಿ ಕೊಳ್ಳದಲ್ಲಿ ನೀರಿಲ್ಲದಿದ್ದರೇ ಹೇಗೆ ತಾನೇ ನೀರು ಬಿಡಲು ಸಾಧ್ಯ? ಮಳೆ ಬರಲಿ ಎಂದು ವರುಣನಿಗೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಮೋಡ ಬಿತ್ತನೆಗಾಗಿ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ಯಾವತ್ತೂ ರೈತರ ಪರವಾಗಿದ್ದು, ರೈತರ ಹಿತವನ್ನೇ ಬಯಸುತ್ತದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.