Publish Date: Sun, 17 May 2020 (11:14 IST)
Updated Date: Sun, 17 May 2020 (11:22 IST)
ಬೆಂಗಳೂರು : ವಲಸಿಗರನ್ನು ಕ್ವಾರಂಟೈನ್ ಮಾಡಲು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಾಲಕಿಯರ ಹಾಸ್ಟೆಲ್ ನಲ್ಲಿ ವಲಸಿಗರನ್ನು ಕ್ವಾರಂಟೈನ್ ಮಾಡಲು ಪೊಲೀಸರು ನಿರ್ಧಾರ ಮಾಡಿದ್ದರು. ಆದರೆ ಅಲ್ಲಿನ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದಾರೆ. ಆದಕಾರಣ ಇದೀಗ ಮಾಳಗಾಳ ಬಳಿ ಕ್ವಾರಂಟೈನ್ ಗೆ ಸಿದ್ಧತೆ ನಡೆಸಲಾಗುತ್ತಿದೆ.