Publish Date: Thu, 14 Mar 2019 (11:59 IST)
Updated Date: Thu, 14 Mar 2019 (12:04 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಸೀಟು ಹಂಚಿಕೆಯ ವಿಚಾರದ ಬಗೆಗಿನ ಗೊಂದಲ ಕೊನೆಗೂ ಬಗೆಹರಿದಿದೆ. ಅದರ ಪ್ರಕಾರ ಕಾಂಗ್ರೆಸ್ 20 ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.
ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಪಟ್ಟಿ ಪ್ರಕಟಿಸಿದ್ದಾರೆ. ಅದರ ಪ್ರಕಾರ ಜೆಡಿಎಸ್ ಹಾಸನ, ಮಂಡ್ಯ, ಬೆಂಗಳೂರು ಉತ್ತರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ವಿಜಯಪುರಗಳು ಲಭಿಸಿವೆ.
ಹಾಗೇ ಉಳಿದಂತೆ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಒಟ್ಟು 20 ಕ್ಷೇತ್ರಗಳು ಕಾಂಗ್ರೆಸ್ ಗೆ ಲಭಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.