ನವದೆಹಲಿ-ಲೋಕಸಭಾ ಚುನಾವಣೆಗೂ ಮುನ್ನ ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್ ನ್ನ ಮಂಡಿಸಲಾಗಿದೆ. ಈ ವೇಳೆ ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ,ಜೈ ಅನುಸಂಧಾನ್ ಎಂಬ ಘೋಷಣೆ ಮಾಡಿದ ವಿತ್ತಸಚಿವೆ ನಿರ್ಮಲಾ ಸೀತರಾಮನ್, ಕೃಷಿ ಕ್ಷೇತ್ರಕ್ಕೆ ಬಿಜೆಪಿ ಅವಧಿಯಲ್ಲಿ ನೀಡಿದ ಕೊಡುಗೆಗಳನ್ನು ಬಣ್ಣಿಸಿದರು.
• ಎಣ್ಣೆ ಕಾಳುಗಳ ಉತ್ಪಾದನೆಯಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಿದ್ದೇವೆ.
• ಕಿಸಾನ್ ಸಂಪದ ಯೋಜನೆಯ ಅಡಿಯಲ್ಲಿ 38 ಕೋಟಿ ರೈತರು ಲಾಭ ಪಡೆದಿದ್ದಾರೆ.
• 11.8 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಲಾಭ ದೊರೆತಿದೆ.
• 4 ಕೋಟಿಗೂ ಹೆಚ್ಚು ರೈತರಿಗೆ ಫಸಲ್ ಬಿಮಾ ಯೋಜನೆಯಿಂದ ಪರಿಹಾರ ಸಿಕ್ಕಿದೆ.
• ಕಳೆದ ಹತ್ತು ವರ್ಷದ ಬಿಜೆಪಿ ಆಡಳಿತದ ಅವಧಿಯಲ್ಲಿ 25 ಕೋಟಿ ರೈತರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ.
• ಆಯುಷ್ಮಾನ್ ಭಾರತ್ ಯೋಜನೆಯನ್ನು ಆಶಾ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗಿದೆ.