ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಓಮಿಕ್ರಾನ್ ಕಂಟ್ರೋಲ್ ಮಾಡಲು. ದಂಡ ಪ್ರಯೋಗವನ್ನು ಮತ್ತೆ ಆರಂಭಿಸಲು ಚಿಂತಿಸಿದ್ದು, ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ.ಮತ್ತು ಹಳ್ಳಿಗಳಲ್ಲಿ 100 ರೂ. ದಂಡ ಪ್ರಯೋಗಿಸಲು ನಿರ್ಧರಿಸಿದೆ.
ಕೋವಿಡ್ ಹೆಚ್ಚುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಂದು ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಹತ್ತು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು. ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು,
18 ವರ್ಷ ಮೇಲ್ಪಟ್ಟ ಎಲ್ಲರಿಗೂ 2 ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕ ಪ್ರದೇಶಗಳ ಬಳಕೆಗೆ ಡಬಲ್ ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ. ಇದರೊಂದಿಗೆ ಮಾಸ್ಕ್ ಹಾಕದಿದ್ದರೆ ದಂಡ ವಿಧಿಸುವ ಕ್ರಮ ಮತ್ತೆ ಆರಂಭ ಆಗುತ್ತಿದೆ. ಸದ್ಯಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕ್ರಮಗಳನ್ನು ತೆಗೆದುಕೊಳ್ಳದಿರಲು ಸರ್ಕಾರ ನಿರ್ಧರಿಸಿದೆ.