ಬೆಂಗಳೂರು : ಕೊರೊನಾ ಹೊಸ ತಳಿ ಪತ್ತೆಯಾದ ಬೆನ್ನಲೆ ಬಿಬಿಎಂಪಿ ಅಧಿಕಾರಿಗಳು ಫೀಲ್ಡಿಗೆ ಇಳಿದು ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ.
ನಿನ್ನೆ (ನ.27) ನಡೆದ ಸಭೆಯಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರ ಅಧಿಕಾರಿಗಳಿಗೆ ಕೆಲ ಸಲಹೆ ನೀಡಿದೆ.
ಜನರಿಗೆ ಮೂರನೇ ಅಲೆ ಹಾಗೂ ಆಫ್ರೀಕಾದ ಹೊಸ ಅಲೆ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರದ ಬಗ್ಗೆ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ಹಾಕಲು ಮುಂದಾಗಿದ್ದಾರೆ.
ತಜ್ಞರ ಸಲಹೆ ಬೆನ್ನಲೆ ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಕೆಆರ್ ಮಾರ್ಕೆಟ್ನಲ್ಲಿ ಕಟ್ಟೆಚ್ಚರ ವಹಿಸುತ್ತಿದ್ದಾರೆ. ದಕ್ಷಿಣ ಆಫ್ರೀಕಾದ ಹೊಸ ತಳಿ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಮಾಸ್ಕ್ ಹಾಕದವರಿಗೆ ಮಾರ್ಷಲ್ಸ್ ದಂಡ ವಿಧಿಸುತ್ತಿದ್ದಾರೆ.