Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೆ ತೆರವು ಮಾಡುವಂತೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.
ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದ್ದರೆ ಪರಿಹಾರ ನೀಡಲಾಗುವುದು. ಹೊಲ-ಗದ್ದೆಗಳ ಬೆಳೆಹಾನಿಗೂ ಪರಿಹಾರ ನೀಡಲಾಗುವುದು. ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು 8 ಸಾವಿರ ಕೋಟಿ ರೂ. ಹಣ ಬಿಡುಗಡೆಯಾಗಿದೆ. ಸೆ.3ರಂದು ಹಾಸನ, ತುಮಕೂರು, ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ