ಕೊರೊನಾ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕೇಸ್ ದಾಖಲು ಮಾಡುವಂತೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.
ಕೆ. ಆರ್. ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದಲ್ಲಿ 50 ಮಂದಿ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ.
ಈ ಸಂಬಂಧ ಜಿಲ್ಲಾಧಿಕಾರಿಗಳ ಆದೇಶ ಅನ್ವಯ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಗ್ರಾಮದಲ್ಲಿ 434 ಜನಸಂಖ್ಯೆ ಇದ್ದು 82 ಮನೆಗಳ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆ ಮಾಡಲಾಗಿದೆ. ಕೊರೋನಾ ಸಂಬಂಧ ಯಾವುದೇ ಸಮಸ್ಯೆಗಳು ಇರುವುದಿಲ್ಲ ಎಂದು ವರದಿಯನ್ನು ಆರೋಗ್ಯ ಸಿಬ್ಬಂದಿ ನೀಡಿರುತ್ತಾರೆ.
ಹೀಗಾಗಿ ಈ ಸಂಬಂಧ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
ಕೆ.ಆರ್.ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದ ಕೆಲವು ಕಿಡಿಗೇಡಿಗಳು ಈ ರೀತಿಯ ವದಂತಿಗಳನ್ನು ಹಬ್ಬಿಸಿದ್ದು ಅವರ ಕುಟುಂಬದ ಸದಸ್ಯರಿಂದ ಈ ಸುಳ್ಳು ಸುದ್ದಿಗಳನ್ನು, ವದಂತಿಗಳನ್ನು ಹಬ್ಬಿಸಿರುತ್ತಾರೆ.
ಸುಳ್ಳು ಸುದ್ದಿ ಹಬ್ಬಿಸದವರ ಮೇಲೆ ಎಫ್ಐಆರ್ ದಾಖಲು ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.