Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಎಂಇಎಸ್ ನಿಷೇಧ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು.
ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ಬೇರೆಡೆ ಪ್ರತಿಭಟನೆ ನಡೆಸಿದ್ದರು.
ಈ ಮೂಲಕವಾಗಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಉಲ್ಲಂಘನೆ ಮಾಡಿದ್ದರು.