ಚಿಕ್ಕಮಗಳೂರು: ಬಿಜೆಪಿ ಮುಖಂಡ ಸಿಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿದ್ದಾರೆ.
ಸಿ.ಟಿ.ರವಿ ತಮ್ಮ ಎಕ್ಸ್ ಖಾತೆಯಲ್ಲಿ ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ಧೈಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು.