Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ರೇಡ್ ನೆಪದಲ್ಲಿ ಹಣ ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಹಳೆ KEB ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಇಸ್ಪಿಟ್ ಅಡ್ಡೆ ಮೇಲೆ ದಾಳಿ ನಡೆಸಿ, ಹಣ ಮೊಬೈಲ್ ವಶಪಡಿಸಿಕೊಂಡು ಕೇಸ್ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ ಮಾಡಲಾಗಿದೆ. ನಾಲ್ವರು ಪೊಲೀಸ್ ಪೇದೆಗಳ ವಿರುದ್ಧ FIR ದಾಖಲಾಗಿದೆ. ಮಂಜುನಾಥ್, ಶ್ರೀಕಾಂತ್ ಮೇಟಿ, ಅಭಿಷೇಕ್, ಮಹೇಶ್ ಬಂಧಿತ ಪೊಲೀಸ್ ಪೇದೆಗಳಾಗಿದ್ದಾರೆ. ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಪೇದೆಗಳು ಕರ್ತವ್ಯ ನಿರ್ವಹಿಸುತ್ತಿದ್ದು, S.P. ಡಾ. ಅರುಣ್ ನಾಲ್ವರು ಪೇದೆಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.