Publish Date: Thu, 09 Mar 2023 (13:58 IST)
Updated Date: Thu, 09 Mar 2023 (14:01 IST)
ಕಾರ್ಲಾನ್ ಹಾಸಿಗೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಕ್ಷಣಾರ್ಧದಲ್ಲಿ ಮಳಿಗೆ ಹೊತ್ತಿಉರಿದಿದೆ.ಬೆಂಗಳೂರು- ಸರ್ಜಾಪುರ ಮುಖ್ಯರಸ್ತೆಯ ಕೈಕೊಂಡ್ರಹಳ್ಳಿ ಬಳಿ ಈ ಘಟನೆ ನಡೆದಿದೆ.
ಬೆಳಿಗ್ಗೆ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.ಕ್ಷಣಾರ್ಧದಲ್ಲಿ ಮಳಿಗೆಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.ಅಕ್ಕಪಕ್ಕದಲ್ಲಿದ್ದ ಮಳಿಗೆಗಳಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.ಈ ವೇಳೆ ಮಳಿಗೆಗಳಲ್ಲಿ ಯಾರು ಇರಲಿಲ್ಲ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ಸಿಬ್ಬಂದಿಗಳ ಆಗಮಿಸಿದ್ದು,ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೆಳ್ಳಂದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.