Publish Date: Fri, 09 Jun 2023 (20:00 IST)
Updated Date: Fri, 09 Jun 2023 (19:49 IST)
ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಬೆಂಕಿಯು ಮೂರನೇ ಹಂತಕ್ಕೆ ತಲುಪಿದೆ. ಶುಕ್ರವಾರ ಮುಂಜಾನೆ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಸಿಲುಕಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಕಾರಣ ವರದಿಯಾಗಿಲ್ಲ.