Publish Date: Mon, 27 Jan 2020 (09:54 IST)
Updated Date: Mon, 27 Jan 2020 (10:48 IST)
ಉಡುಪಿ : ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ದೇಶದಾದ್ಯಂತ ಹಲವಡೆ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ಉಡುಪಿಯಲ್ಲಿ ಸಿಎಎ ವಿರೋಧಿಸಿ ಪ್ರತಿಭಟನಕಾರರು ಪಂಜು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಂಕಿ ಪ್ರತಿಭಟನೆಗೆ ಕರೆ ನೀಡಿದ್ದು, ಹಲವು ಸಂಘಟನೆಗಳು ಇದಕ್ಕೆ ಕೈಜೋಡಿಸಿದ್ದು, ನೂರಾರು ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ರಸ್ತೆಗಿಳಿಯಲು ಪೊಲೀಸರು ಅವಕಾಶ ಕೊಡದ ಹಿನ್ನಲೆಯಲ್ಲಿ ನಗರದ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ದ ಸ್ಮಾರಕದ ಬಳಿ ಜನರು ಕೊಳ್ಳಿ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.