Webdunia - Bharat's app for daily news and videos

Install App

ಕಲಬುರ್ಗಿ ಜಿಲ್ಲಾಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ: ನಾಲ್ವರು ಸಿಬ್ಬಂದಿ ಅಸ್ವಸ್ಥ

Webdunia
ಶನಿವಾರ, 7 ಅಕ್ಟೋಬರ್ 2017 (22:38 IST)
ಕಲಬುರ್ಗಿ: ಜಿಲ್ಲಾ ಆಸ್ಪತ್ರೆಯ ಎಕ್ಸ್ ರೇ ತೆಗೆಯುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ.

ಎಸಿ ಸ್ಟಬಿಲೈಜರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಟ್ಟಿದ್ದ ದಹನ ಸಿಲಿಂಡರ್ ನಿಂದ ಆಸ್ಪತ್ರೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಕೋಣೆಯಲ್ಲಿರುವ ಮಷಿನ್ ಹೊರತೆಗೆಯಲು ಹೋದಾಗ ವಿಷಕಾರಿ ಹೊಗೆ ಸೇವಿಸಿದ ಪರಿಣಾಮ ನಾಲ್ವರು ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ.

ಡಿ ಗ್ರೂಪ್ ಸಿಬ್ಬಂದಿ ಸಾತಲಿಂಗ್ , ಫಜಲ್, ರಾಚಪ್ಪ ಮತ್ತು ರವಿಕುಮಾರ್ ಅಸ್ವಸ್ಥರಾಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಒಳ ನುಗ್ಗಿದ ಸಿಬ್ಬಂದಿ ಎಕ್ಸ್ ರೇ ಮಷಿನ್ ಸೇರಿದಂತೆ ಕೋಣೆಯಲ್ಲಿರುವ ಲಕ್ಷಾಂತರ ಮೌಲ್ಯ ಬೆಲೆಬಾಳುವ ಯಂತ್ರೋಪಕರಣಗಳನ್ನು ಹೊರ ತಂದಿದ್ದಾರೆ. ಅಸ್ವಸ್ಥರಾಗಿರುವ ಸಿಬ್ಬಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments