ಬೆಂಗಳೂರಿನ ಪ್ರತಿಷ್ಠಿತ ಬಹುಮಹಡಿ ಕಟ್ಟಡ ಎಂಎಸ್ ಬಿಲ್ಡಿಂಗ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಎರಡು ಕೊಠಡಿಗಳಲ್ಲಿದ್ದ ಕಡತಗಳು ಸುಟ್ಟು ಕರಕಲಾಗಿವೆ.
ವಿಧಾನಸೌಧದ ಪಕ್ಕದಲ್ಲಿಯೇ ಇರುವ ಎಂಎಸ್ ಬಿಲ್ಡಿಂಗ್ನ 5ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಭೂ ಸ್ವಾಧೀನ ಇಲಾಖೆ ಅಧೀನ ಕಾರ್ಯದರ್ಶಿ ಕಚೇರಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತದೆ.
ಎಸಿ ಮತ್ತು ಕಂಪ್ಯೂಟರ್ ಸ್ವಿಚ್ ಆಫ್ ಮಾಡದ ಹಿನ್ನೆಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಬಹುದೆಂದು ಎಂದು ಊಹಿಸಲಾಗಿದೆ.
ಎರಡು ಕೊಠಡಿಗಳಲ್ಲಿದ್ದ ಕಡತಗಳು ಬೆಂಕಿಗೆ ಆಹುತಿಯಾಗಿದ್ದು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.