Publish Date: Sat, 29 Oct 2022 (17:43 IST)
Updated Date: Sat, 29 Oct 2022 (17:48 IST)
ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಂದರ್ಭದಲ್ಲಿ ವಿಮಾನದ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ದೆಹಲಿ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನ 6E-2131 ಟೆಕ್ ಆಫ್ ಅನ್ನು ಸ್ಥಗಿತಗೊಳಿಸಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ಈ ವೇಳೆ ಪ್ರಯಾಣಿಕರಲ್ಲಿ ಒಬ್ಬರಾದ ಪ್ರಿಯಾಂಕಾ ಕುಮಾರ್ ಘಟನೆಯ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಅದು ಎಂಜಿನ್‌ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟೇಕ್ ಆಫ್ ಆಗುವಾಗ ಇಂಜಿನ್‌ಗೆ ಬೆಂಕಿ ಕಾಣಿಸಿಕೊಂಡಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ವಿಮಾನದಲ್ಲಿಲ್ಲ ಎಂದು ಪ್ರಯಾಣಿಕರೊಬ್ಬರು.
geetha
Publish Date: Sat, 29 Oct 2022 (17:43 IST)
Updated Date: Sat, 29 Oct 2022 (17:48 IST)