Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೈಸೂರು : ದಸರಾ ಆನೆ ಬಲರಾಮನಿಗೆ ಬಂದೂಕಿನಿಂದ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬಾತ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ ಚೇತರಿಸಿಕೊಂಡಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತನಿಂದ ಬಂದೂಕು, ಕಾರ್ಟ್ರಿಜ್ನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.