Publish Date: Tue, 24 Oct 2023 (15:20 IST)
Updated Date: Tue, 24 Oct 2023 (15:48 IST)
ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ, ಆರೋಪಿಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಆರು ಆರೋಪಿಗಳ ಪೈಕಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಮೂರು ಜನರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.