ಬೆಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದು, ಮುಖ್ಯವಾಗಿ ಐದು ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುವ ಅಭಿವೃದ್ಧಿಪರ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ. ಕೊರೊನಾ ಲಾಕ್ ಡೌನ್, ಪ್ರವಾಹ ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ. ಕೊರೊನಾ, ಲಾಕ್ ಡೌನ್, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.