ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗಾರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನೂ ಕಟ್ಟಡ ಕುಸಿತದಲ್ಲಿ ಗಾಯಗೊಂಡಿರುವ 7 ಜನರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಬೆಂಗಳೂರು ಮಹಾನಗರ ಪಾಲಿಕೆಯೇ ಬರಿಸಲಿದೆ ಎಂದು ತಿಳಿಸಿದ್ದಾರೆ.
ಕೇವಲ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಅನುಮತಿ ಪಡೆದು ಕಾನೂನು ಬಾಹಿರವಾಗಿ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ. ಪ್ರಕರಣ ಕುರಿತು ತನಿಖೆ ಮಾಡಲು ಒಂದು ವಿಶೇಷ ತಂಡ ರಚಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಸ್ಪಷ್ಟಪಡಿಸಿದ್ದಾರೆ.
ಮಾರತಹಳ್ಳಿಯ ಬೆಳ್ಳಂದೂರ್‌ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 4 ಜನರು ಮೃತಪಟ್ಟು, 15ಕ್ಕೂ ಹೆಚ್ಚು ಜನರು ಕಟ್ಟಡದಡಿಯಲ್ಲಿ ಸಿಲುಕಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ