Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಕೆ- ಅನಿಲ್ ಲಾಡ್ ಸೇರಿ 11ಜನರ ವಿರುದ್ಧ ಕೇಸ್

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಕೆ- ಅನಿಲ್ ಲಾಡ್ ಸೇರಿ 11ಜನರ ವಿರುದ್ಧ ಕೇಸ್
ಬಳ್ಳಾರಿ , ಗುರುವಾರ, 25 ಜನವರಿ 2018 (21:07 IST)

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದ್ದಕ್ಕೆ ಶಾಸಕ ಅನಿಲ್ ಲಾಡ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗಿದೆ.

ಬ್ರೂಸ್ ಪೇಟೆ ಹಾಗೂ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹನುಮಂತಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಜೆಪಿ ಪರಿವರ್ತನಾ ಯಾತ್ರೆಗೆ ಹಾಗೂ ಕಾಂಗ್ರೆಸ್ ನಾಯಕರನ್ನು ಸ್ವಾಗತಿಸಲು ಪಾಲಿಕೆಯ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಲಾಗಿತ್ತು. ದಂಡ ಪಾವತಿಸಲು ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡದ ಪರಿಣಾಮ ಪ್ರಕರಣ ದಾಖಲು ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

150 ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆ- ಕುಮಾರಸ್ವಾಮಿ