ಬೆಂಗಳೂರು : ಕೃಷ್ಣಾ ನದಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾದ ಹಿನ್ನೆಲೆಯಲ್ಲಿ, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಸಿಎಂ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಆದ ಕಾರಣ ಸಿಎಂ ದೆಹಲಿ ಪ್ರವಾಸ ರದ್ದುಗೊಳಿಸಿ, ಕರ್ನಾಟಕ ವಿಪತ್ತು ನಿರ್ವಹಣಾ ಸಭೆ ಕರೆಯುವಂತೆ ಹಾಗೂ ಕೂಡಲೇ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳುವಂತೆ ಕೋರಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಅಲ್ಲದೇ ಉತ್ತರ ಕರ್ನಾಟಕದ ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಗದಗ ಜಿಲ್ಲೆಯ ಜನರಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಪ್ರಧಾನಿ ಮೋದಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ತಿಳಿಸಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.