Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ : ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ : ಸಿಎಂ ಸೂಚನೆ
ಬೆಂಗಳೂರು , ಬುಧವಾರ, 6 ಸೆಪ್ಟಂಬರ್ 2023 (12:10 IST)
ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
 
ಅವರು ಮಂಗಳವಾರ ಮಾನವ-ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡೆದೇವನಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೃಷ್ಣ ನಾಯಕ್ ಎಂಬ 10 ವರ್ಷದ ಬಾಲಕನನ್ನು ಹುಲಿ ಎತ್ತೊಯ್ದಿರುವ ಕುರಿತು ಆತಂಕ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಇಂತಹ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು. ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ ತೆರವುಗೊಳಿಸಲು ಸೂಚಿಸಿದರು. ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್ ಅವರು ಆನೆ ತುಳಿತಕ್ಕೆ ಬಲಿ ಆಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಹಾಸನ ಡಿಎಫ್ಒಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ನಿರ್ದೇಶನ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ 318 ಕ್ಯೂಸೆಕ್ ನೀರು ಬಿಡುಗಡೆ