Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

BPL ಕಾರ್ಡ್ ದಾರರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ

BPL ಕಾರ್ಡ್ ದಾರರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ
bangalore , ಶನಿವಾರ, 26 ಆಗಸ್ಟ್ 2023 (19:37 IST)
ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸೋದನ್ನು ಸ್ಥಗಿತಗೊಳಿಸಲಾಗಿತ್ತು. ಚುನಾವಣೆ ಬಳಿಕ ಆಡಳಿತಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪಡಿತರ ಚೀಟಿ ಬಗ್ಗೆ ಜನರಿಗೆ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸಿತು. ಹೀಗಾಗಿ ಜನ ಗೊಂದಲಕ್ಕಿದಾಗಿದ್ದರು. ಇಂದು ಈ ಎಲ್ಲ ಗೊಂದಲಗಳಿಗೂ ಆಹಾರ ಸಚಿವ ಕೆಎಚ್ ಮುನಿಯಪ್ಪ ತೇರೆ ಎಳದಿದ್ದು ಆದಷ್ಟು ಬೇಗ ಎಲ್ಲಗರಿಗೂ ಪಡಿತರ ಚೀಟಿ ನೀಡಲಾಗುವದು ಯಾರು ಕೂಡ ಆತಂಕ ಪಡುವ ಅಗತ್ಯ ಇಲ್ಲಾ ಎಂದು ತಿಳಿಸಿದ್ದಾರೆ.

 ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ಗೆ 3 ಲಕ್ಷ ಅರ್ಜಿ ಬಂದಿದ್ದವು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿಯೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ, ಅರ್ಹ ಜನರಿಗೆ ಯಾವುದೇ ತೊಂದರೆ ಆಗಲ್ಲ .ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು. ಎಲ್ಲವನ್ನೂ ಪರಿಶೀಲನೆ ಮಾಡಿ ಮುಂದಿನ 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ.ಇನ್ನೂ ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ. ನ್ಯಾಯಬೆಲೆ ಅಂಗಡಿಯಲ್ಲಿ ನೀವು ಬ್ಯಾಂಕ್ ಖಾತೆಗೆ ಆಧಾರ್ ಕೂಡ ಲಿಂಕ್ ಮಾಡಿಸಿಕೊಳ್ಳಬಹುದು ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

KSRTC ಬಸ್ ಚಾಲಕ ಅಮಾನತು