Publish Date: Mon, 21 Oct 2019 (11:04 IST)
Updated Date: Mon, 21 Oct 2019 (11:07 IST)
ಮೈಸೂರು : ಮತ್ತೆ ನಾವು ಕಾಂಗ್ರೆಸ್ ಗೆ ಹೋಗಲ್ಲ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟವಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಸಿ ಪಾಟೀಲ್, ಬಿಜೆಪಿ ಅಭ್ಯರ್ಥಿಯಾಗುವ ವಿಚಾರವೂ ನಿರ್ಧಾರ ಆಗಿಲ್ಲ. ಅನರ್ಹ ಶಾಸಕರೆಲ್ಲರೂ ಚರ್ಚಿಸಿ ನಿರ್ಧಾರ ಕೈಗೊಳ್ತೇವೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ನಾಳೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನಲೆ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಅನರ್ಹಗೊಳಿಸಿದ ಸ್ಪೀಕರ್ ಆದೇಶ ಸಂವಿಧಾನ ಬಾಹಿರ. ಬಹುತೇಕ ಅನರ್ಹ ಶಾಸಕರು ದೆಹಲಿಗೆ ಹೋಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಮಳೆಯಿಂದ ಬಾರೀ ಹಾನಿಯಾಗುವ ಸಂಭವಿವಿದೆ. ಆದ್ದರಿಂದ ನಾನು ದೆಹಲಿಗೆ ಹೋಗಿಲ್ಲ ಎಂದು ಅವರು ತಿಳಿಸಿದ್ದಾರೆ.